
ಶಿವಮೊಗ್ಗ : ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ನಾಳೆ (ಸೆ.12) ರಂದು ಮಧ್ಯಾಹ್ನ 1.30ಕ್ಕೆ ಜಿಲ್ಲೆಗೆ ಆಗಮಿಸಿ ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗೂ ನಂತರ ನೂತನವಾಗಿ ನಿರ್ಮಿಸಿರುವ ಪರಿವೀಕ್ಷಣಾ ಮಂದಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನಂತರ ಮಧ್ಯಾಹ್ನ 3.30ಕ್ಕೆ ವಾಪಾಸ್ಸು ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಉಪಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದನ್ನೂ ಓದಿ » ಸಂಭ್ರಮದಿಂದ ಸಾಗಿದ ‘ಓಂ ಗಣಪತಿ’ ವಿಸರ್ಜನಾ ಪೂರ್ವ ಮೆರವಣಿಗೆ, ಹೇಗಿತ್ತು ವಾತಾವರಣ?