ಬಂಕ್ ಮಾಲೀಕರಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಎಚ್ಚರಿಕೆ, ಕಾರಣವೇನು?

ಶಿವಮೊಗ್ಗ : ಜಿಲ್ಲೆಯಾದ್ಯಂತ ಇರುವ ಆಟೋ ಎಲ್‌ಪಿಜಿ ಮತ್ತು ಸಿಎನ್‌ಜಿ ಬಂಕ್‌ಗಳಲ್ಲಿ ಇಂಧನವನ್ನು ಸರ್ಕಾರ ಹಾಗೂ ತೈಲ ಕಂಪನಿಗಳು ನಿಗದಿಪಡಿಸಿದ ದರದಲ್ಲೇ ಮಾರಾಟ ಮಾಡುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಕಟ್ಟುನಿಟ್ಟಾಗಿ ತಿಳಿಸಿದ್ದಾರೆ.

ಇದನ್ನೂ ಓದಿ » ಪಾರದರ್ಶಕ ಹಾಗೂ ನಿಖರ ಜನಗಣತಿಗೆ ಡಿಸಿ ಸೂಚನೆ 

ದರ ಪ್ರದರ್ಶನ ಕಡ್ಡಾಯ : ತೈಲ ಕಂಪನಿಗಳು ಅಥವಾ ಖಾಸಗಿ ಸಂಸ್ಥೆಗಳು ನಿಗದಿಪಡಿಸಿದ ದರದ ವಿವರವನ್ನು ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಕಾಣುವಂತೆ ಬಂಕ್‌ಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು.

ಹೆಚ್ಚುವರಿ ಹಣ ವಸೂಲಿ ಮಾಡುವಂತಿಲ್ಲ : ಯಾವುದೇ ಕಾರಣಕ್ಕೂ ನಿಗದಿತ ದರಕ್ಕಿಂತ ಹೆಚ್ಚಿನ ಹಣವನ್ನು ಗ್ರಾಹಕರಿಂದ ಪಡೆಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಕಾನೂನು ಕ್ರಮದ ಎಚ್ಚರಿಕೆ : ಒಂದು ವೇಳೆ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವುದು ಕಂಡುಬಂದಲ್ಲಿ, ಅಂತಹ ಬಂಕ್ ಮಾಲೀಕರ ವಿರುದ್ಧ ‘ಅಗತ್ಯ ವಸ್ತುಗಳ ಕಾಯ್ದೆ-1955’ ಮತ್ತು ‘ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (ರೆಗ್ಯುಲೇಷನ್ ಆಫ್ ಯೂಸ್ ಇನ್ ಮೋಟರ್ ವೆಹಿಕಲ್ಸ್) ಆರ್ಡರ್-2001’ ರ ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ » ಐಪಿಎಲ್ ಟಿಕೆಟ್ ನಿರಾಕರಿಸಿದ ಶಾಸಕ ಚೆನ್ನಿ, ಸ್ಪೀಕರ್ ಗೆ ಬರೆದ ಪತ್ರದಲ್ಲೇನಿದೆ?

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...