
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಜಿಲ್ಲೆಗೆ ಶಿವಮೊಗ್ಗಕ್ಕೆ ಕೋಲಾರ ಜಿಲ್ಲೆಯ ರಕ್ಷಣಾಧಿಕಾರಿಯಾಗಿರುವ ಬಿ.ನಿಖಿಲ್ ಅವರನ್ನು ವರ್ಗಾಯಿಸಲಾಗಿದೆ.
ಜಿಲ್ಲೆಯ ನೂತನ ರಕ್ಷಣಾಧಿಕಾರಿಯಾದ ಬಿ.ನಿಖಿಲ್ ರವರು ಈ ಹಿಂದೆ ಕೋಲಾರ ಜಿಲ್ಲೆಯಲ್ಲಿ ರಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ಇದೀಗ ಶಿವಮೊಗ್ಗ ಜಿಲ್ಲೆಗೆ ನೇಮಕ ಮಾಡಿದ್ದಾರೆ.

ಜಿ.ಕೆ.ಮಿಥುನ್ ಕುಮಾರ್ ಅವರು 2022ರ ಅಕ್ಟೋಬರ್ 05 ರಂದು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಅವರನ್ನು ಬೆಂಗಳೂರು ನಗರದ ಈಶಾನ್ಯ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ » ಹಿಂದೂ ಸನಾತನ ಧರ್ಮದಲ್ಲಿ ಗೋವುಗಳಿಗೆ ಪವಿತ್ರ ಸ್ಥಾನ ಇದೆ