ರೌಡಿಶೀಟರ್‌ ಕಾಲಿಗೆ ಗುಂಡು ಹಾರಿಸಿದ ಶಿವಮೊಗ್ಗ ಪೊಲೀಸರು, ಘಟನೆ ಕುರಿತು ಎಸ್ಪಿ ಏನಂದ್ರು?

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ ನಡೆದ ಅಮ್ಜದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರೌಡಿಶೀಟರ್‌ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆತನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಎಸ್ಪಿ ಜಿ.ಕೆ.ಮಿಥುನ್‌ ಕುಮಾರ್‌ ಪ್ರತಿಕ್ರಿಯೆ ನೀಡಿದರು.

ಅಮ್ಜದ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಅಕ್ಬರ್ ನ್ನು ಬಂಧಿಸಲು ತೆರಳಿದ್ದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕಾರಣ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ಬಂಧಿತ ಆರೋಪಿ ಅಕ್ಬರ್ ಮೇಲೆ ಈಗಾಗಲೇ ಕೊಲೆ ಯತ್ನ ಮತ್ತು ಸುಲಿಗೆಯಂತಹ ನಾಲ್ಕು ಗಂಭೀರ ಪ್ರಕರಣಗಳು ದಾಖಲಾಗಿವೆ.

ಕೆಲ ದಿನಗಳ ಹಿಂದೆ ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಮ್ಜದ್ ಕೊಲೆ ಪ್ರಕರಣದಲ್ಲೂ ಅಕ್ಬರ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐದು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ನಮ್ಮ ಅಧಿಕಾರಿಗಳು ಅಕ್ಬರ್‌ಗಾಗಿ ಸಾಕಷ್ಟು ಹುಡುಕಾಟ ನಡೆಸಿದ್ದರು. ಇಂದು ಖಚಿತ ಮಾಹಿತಿ ಮೇರೆಗೆ ಆತನನ್ನು ಬಂಧಿಸಲು ತೆರಳಿದಾಗ, ನಮ್ಮ ಸಿಬ್ಬಂದಿ ಮೇಲೆ ಆತ ಹಲ್ಲೆಗೆ ಮುಂದಾಗಿದ್ದಾನೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ, ಪಿಎಸ್ಐ ಮಂಜುನಾಥ್ ಅವರು ಆತ್ಮರಕ್ಷಣೆಗಾಗಿ ರೌಡಿಶೀಟರ್ ಅಕ್ಬರ್‌ನ ಎಡಗಾಲಿಗೆ ಫೈರ್ ಮಾಡಿ ಬಂಧಿಸಿದ್ದಾರೆ. ಈ ಮೂಲಕ ಅಮ್ಜದ್ ಕೊಲೆ ಪ್ರಕರಣದಲ್ಲಿ ಒಟ್ಟು ಆರು ಜನರ ಬಂಧನವಾದಂತಾಗಿದೆ.

ಅಕ್ಬರ್ ಒಬ್ಬ ರೌಡಿಶೀಟರ್ ಆಗಿದ್ದು, ಈತನ ಮೇಲೆ ಗಂಭೀರ ಪ್ರಕರಣಗಳಿವೆ. ಉಳಿದ ಆರೋಪಿಗಳ ಬಂಧನದ ಸಂಬಂಧ ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ಜಿ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

ಯಾರ್ ಈ ರೌಡಿಶೀಟರ್‌ ?

ರೌಡಿಶೀಟರ್‌ ಅಕ್ಬರ್‌ (21) ಕಾಲಿಗೆ ಗುಂಡು ತಗುಲಿದ್ದು, ಅಮ್ಜದ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಶಿವಮೊಗ್ಗ ನಗರ ಹೊರವಲಯದ ಪುರಲೆ ಬಳಿ ನಡೆದಿದೆ. ನ್ಯೂಮಂಡ್ಲಿಯ ನಿವಾಸಿ ಅಕ್ಬರ್ ಮೇಲೆ ಈಗಾಗಲೇ ನಾಲ್ಕಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಅಮ್ಜದ್ ಕೊಲೆ ಪ್ರಕರಣದಲ್ಲಿ ಸಹ ಆತ ಆರೋಪಿಯಾಗಿದ್ದಾನೆ. ಗಾಯಗೊಂಡ ರೌಡಿಶೀಟರ್ ಅಕ್ಬರ್‌ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...