
ಶಿವಮೊಗ್ಗ : ಮಹಿಳೆಯೊಬ್ಬರ ಮಾಂಗಲ್ಯ ಸರ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ: ಅಕ್ರಮ ದಂಧೆಗೆ ಪೊಲೀಸ್ ಡ್ರೋನ್ ಶಾಕ್, 19 ಜನರ ವಿರುದ್ಧ ಎಫ್ಐಆರ್ ದಾಖಲು
ಮಹಿಳಾ ಸಂಘದ ಸಭೆಯೊಂದರಲ್ಲಿ ಭಾಗವಹಿಸಲು ಶಿವಮೊಗ್ಗ ನಗರದ ಮಹಿಳೆಯೊಬ್ಬರು ಇದೇ 25 ರಂದು ಬೆಳಿಗ್ಗೆ ಹೊಳಲೂರಿಗೆ ಆಗಮಿಸಿದ್ದರು. ಸರ್ಕಾರಿ ಆಸ್ಪತ್ರೆ ಬಳಿ ನಡೆದುಕೊಂಡು ಹೋಗುವಾಗ, ಬೈಕ್ ನಲ್ಲಿ ಆಗಮಿಸಿದ ಆರೋಪಿಗಳು 35 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ಸಂಬಂಧ ಮನೋಜ್ ಶಿರಮಣ ಹಾಗೂ ವಿಜಯ್ ಕುಮಾರ್ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಸ್ಪ್ಲೆಂಡರ್ ಬೈಕ್ ಹಾಗೂ 2.50 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ಸ್ಪೆಕ್ಟರ್ ರಾಘವೇಂದ್ರ ಕಾಂಡಿಕೆ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಇದನ್ನೂ ಓದಿ » ಹುಲಿಕಲ್ ಘಾಟ್ ಮಣ್ಣು ಕುಸಿತ ಪ್ರಕರಣ-ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಎಸ್.ಮಧು ಬಂಗಾರಪ್ಪ