ಎನ್‌ಡಿಎ ಪರೀಕ್ಷೆಯಲ್ಲಿ ಭದ್ರಾವತಿಯ ಶ್ರೇಯಾ ದೇಶಕ್ಕೆ ಪ್ರಥಮ!

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ತಿಮ್ಮಾಪುರ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿನಿ ಶ್ರೇಯಾ ಎನ್. ಗೌಡ ಅವರು ಯುಪಿಎಸ್‌ಸಿ ನಡೆಸುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಪರೀಕ್ಷೆಯಲ್ಲಿ ಮಹಿಳಾ ವಿಭಾಗದಲ್ಲಿ ದೇಶಕ್ಕೆ ಪ್ರಥಮ ರ‍್ಯಾಂಕ್ ಪಡೆಯುವ ಮೂಲಕ ಜಿಲ್ಲೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಇದನ್ನೂ ಓದಿ » ಮನೆ ಒಡತಿಯರಿಗೆ ದೀಪಾವಳಿ ಕೊಡುಗೆ! ಗೃಹಲಕ್ಷ್ಮಿಯ 3 ಕಂತುಗಳ ರೂ.6,000 ಒಂದೇ ದಿನ ಬಿಡುಗಡೆ

ಬಾಲ್ಯದಿಂದಲೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಸೈನಿಕಳಾಗಬೇಕೆಂಬ ಮಹದಾಸೆ ಹೊಂದಿದ್ದ ಶ್ರೇಯಾ, ತಮ್ಮ ಮೊದಲ ಪ್ರಯತ್ನದಲ್ಲೇ ದೇಶದ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವುದು ವಿಶೇಷವಾಗಿದೆ.

ಶ್ರೇಯಾ ಅವರು 1ರಿಂದ 10ನೇ ತರಗತಿವರೆಗೆ ಭದ್ರಾವತಿಯ ಬಿಜಿಎಸ್ ಕಾರೇಹಳ್ಳಿ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದಾರೆ. ನಂತರ ಬೆಂಗಳೂರಿನ ರಾಜಾಜಿನಗರದ ಬೇಸ್ ಪಿಯು ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪೂರ್ಣಗೊಳಿಸಿದ್ದು, ಪ್ರಸ್ತುತ ಮಂಗಳೂರಿನ ಸುರತ್ಕಲ್‌ನ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಾರೆ.

8ನೇ ತರಗತಿಯಲ್ಲಿ ಓದುತ್ತಿದ್ದಾಗ ಎನ್‌ಡಿಎಗೆ ಮಹಿಳೆಯರಿಗೂ ಪ್ರವೇಶಾವಕಾಶ ದೊರೆತಿರುವ ವಿಷಯ ತಿಳಿದ ಶ್ರೇಯಾ ಅವರ ಮನದಲ್ಲಿ ಸೈನ್ಯಕ್ಕೆ ಸೇರುವ ಕನಸು ಮತ್ತಷ್ಟು ಗಟ್ಟಿಯಾಯಿತು. ಅಂದಿನಿಂದಲೇ ಎನ್‌ಡಿಎ ಸೇರುವ ಗುರಿಯೊಂದಿಗೆ ಸಿದ್ಧತೆ ನಡೆಸಿದ್ದ ಅವರು, ಮೊದಲ ಅವಕಾಶದಲ್ಲೇ ಮಹಿಳಾ ವಿಭಾಗದಲ್ಲಿ ದೇಶಕ್ಕೆ ಪ್ರಥಮ ಸ್ಥಾನ ಗಳಿಸಿ ತಮ್ಮ ಕನಸಿನತ್ತ ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ಶ್ರೇಯಾ ಅವರ ತಂದೆ ನಾಗೇಂದ್ರ ಜೆ. ಅವರು ವಿಐಎಸ್‌ಎಲ್ ಕಾರ್ಖಾನೆಯ ಉದ್ಯೋಗಿಯಾಗಿದ್ದು, ತಾಯಿ ಡಾ. ಆಶಾ ಬಿ.ಎಂ. ಅವರು ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಗಳ ಆಸಕ್ತಿ ಮತ್ತು ಗುರಿಗೆ ಸಂಪೂರ್ಣ ಬೆಂಬಲ ನೀಡಿ ಪ್ರೋತ್ಸಾಹಿಸಿದ ಪೋಷಕರ ಸಹಕಾರವೂ ಈ ಸಾಧನೆಗೆ ಪ್ರೇರಣೆಯಾಗಿದೆ.

ಸೈನಿಕಳಾಗಬೇಕೆಂಬ ಬಾಲ್ಯದ ಕನಸನ್ನು ಕಠಿಣ ಪರಿಶ್ರಮ, ಛಲ ಮತ್ತು ನಿರಂತರ ಪ್ರಯತ್ನದ ಮೂಲಕ ನನಸಾಗಿಸಿಕೊಳ್ಳುತ್ತಿರುವ ಶ್ರೇಯಾ ಅವರ ಸಾಧನೆ ಯುವಜನತೆಗೆ, ವಿಶೇಷವಾಗಿ ಹೆಣ್ಣುಮಕ್ಕಳಿಗೆ ಮಾದರಿಯಾಗಿದೆ. ಅವರ ಈ ಅಭೂತಪೂರ್ವ ಸಾಧನೆಗೆ ಭದ್ರಾವತಿ ಸೇರಿದಂತೆ ಜಿಲ್ಲೆಯಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

ಇದನ್ನೂ ಓದಿ » ಬಹುದಿನಗಳ ಕನಸಿಗೆ ಬಲ: ತುಂಗಾ ಸೇತುವೆ ಅನುಮೋದನೆಗೆ ಶಾಸಕ ಚೆನ್ನಿ ಸಂತಸ!

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...