ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ವಿಶೇಷ ಪೂಜೆ, ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಒಂದು ತಿಂಗಳ ಕಾಲ ದೇಶಾದ್ಯಂತ ಹಮ್ಮಿಕೊಳ್ಳಲಾಗಿರುವ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಶಿವಮೊಗ್ಗದಲ್ಲಿ ಚಾಲನೆ ನೀಡಲಾಯಿತು.

ಶಿವಮೊಗ್ಗ ನಗರದ ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶಸೇವೆ ಮುಂದುವರಿಸಲು ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಲಾಯಿತು.

ಅಭಿಯಾನದ ಉದ್ಘಾಟನಾ ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ನೆರವೇರಿಸಿದರು. ‘ಸೇವಾ ಸಂಕಲ್ಪ’ದ ಆಶಯದಂತೆ ಜನಸೇವೆಯೇ ಜನಾರ್ದನ ಸೇವೆ ಎಂಬ ಭಾವನೆಯೊಂದಿಗೆ ವಿವಿಧ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳುವ ಸಂಕಲ್ಪ ಮಾಡಲಾಯಿತು.

ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಸ್ಮರಿಸಿ ‘ಸೇವಾ ಸಂಕಲ್ಪ ಅಭಿಯಾನ’ದ ಆರಂಭಿಕ ಕಾರ್ಯಕ್ರಮವಾಗಿ ಆಶೀರ್ವಾದ ದೀಪವನ್ನು ಆಯೋಜಿಸಲಾಗಿದ್ದು,  ಇಂದು (ಸೆ.17) ಸಂಜೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೀರ್ಘಾಯುಷ್ಯ, ಉತ್ತಮ ಆರೋಗ್ಯ ಹಾಗೂ ದೇಶದ ಅಭಿವೃದ್ಧಿಗಾಗಿ ಪ್ರಾರ್ಥಿಸಿ ಪ್ರತಿ ಮನೆಗಳಲ್ಲಿ ದೀಪ ಬೆಳಗಿಸಿ.

ಬಿ.ವೈ.ರಾಘವೇಂದ್ರ, ಸಂಸದರು


ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ಜಗದೀಶ್ ಎನ್.ಕೆ., ಶಿವಮೊಗ್ಗ ನಗರ ಅಧ್ಯಕ್ಷ ಮೋಹನ್ ರೆಡ್ಡಿ, ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಧನಂಜಯ ಸರ್ಜಿ, ಜಿಲ್ಲಾ ಉಪಾಧ್ಯಕ್ಷರಾದ ಜ್ಞಾನೇಶ್ವರ್ ಎನ್.ಜಿ. ಹಾಗೂ ನಾಗರಾಜ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಕೆ. ನವಲೆ ಮತ್ತು ದಿನದಯಾಳು ಸೇರಿದಂತೆ ಪಕ್ಷದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

ಇದನ್ನೂ ಓದಿ » 1,886 ಬೂತ್‌ಗಳಲ್ಲಿ ಸೇವೆಯ ಸಂಭ್ರಮ: ಸೆ.17 ರಿಂದ ‘ಸೇವಾ ಸಂಕಲ್ಪ ಅಭಿಯಾನ’: ಬಿವೈಆರ್

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...