ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗೆ ಲೋಕಾ ಶಾಕ್!

ಶಿವಮೊಗ್ಗ : ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ಮುಂದುವರಿದಿದ್ದು, ಮಂಗಳವಾರ ಮುಂಜಾನೆ ದೇವರಾಜ್ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ.ಕೆ.ಆರ್. ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಶೋಭಾ ಅವರ ಶಿಕಾರಿಪುರ ಬಳಿಯ ತರಲಘಟ್ಟ ನಿವಾಸ ಸಾಗರ ತಾಲೂಕಿನ ಆನಂದಪುರ ಬಳಿಯ ಆಚಾಪುರದ ಶಾಲೆ ಹಾಗೂ ಕಚೇರಿಯ ಗೆಜೆಟೆಡ್ ಅಧಿಕಾರಿ ರಾಘವೇಂದ್ರ ಅವರ ಶಿವಮೊಗ್ಗದ ಚಾಲುಕ್ಯ ನಗರದ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

ಜಿಲ್ಲಾ ಅಧಿಕಾರಿ ಶೋಭಾ ಅವರು ತಮ್ಮ ಅಧಿಕಾರ ಅವಧಿಯಲ್ಲಿ ನಿಗದಿತ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಅಕ್ರಮ ಸಂಪತ್ತು ಕ್ರೋಢೀಕರಿಸಿದ್ದಾರೆ ಎಂಬ ಗಂಭೀರ ದೂರುಗಳು ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದವು. ಈ ಖಚಿತ ಮಾಹಿತಿ ಮತ್ತು ದೂರಿನ ಅನ್ವಯ ಅಧಿಕಾರಿಗಳು ಇಂದು (ಮಂಗಳವಾರ) ಬೆಳ್ಳಂಬೆಳಿಗ್ಗೆ ದಾಳಿ ನಡೆಸಿ ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಏಕಕಾಲಕ್ಕೆ ಹಲವು ಕಡೆ ದಾಳಿ : 

ಶಿವಮೊಗ್ಗ, ದಾವಣಗೆರೆ ಹಾಗೂ ಹಾವೇರಿ ಜಿಲ್ಲೆಗಳ ಲೋಕಾಯುಕ್ತ ಅಧಿಕಾರಿಗಳನ್ನೊಳಗೊಂಡ ಪ್ರತ್ಯೇಕ ತಂಡಗಳು ಒಟ್ಟು ನಾಲ್ಕು ಕಡೆಗಳಲ್ಲಿ ಏಕಕಾಲಕ್ಕೆ ಪರಿಶೀಲನೆ ಆರಂಭಿಸಿವೆ.

ಶೋಭಾ ಅವರ ಆಪ್ತ ಸಹಾಯಕನ ಮನೆ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದ್ದು, ದಾಳಿಯಲ್ಲಿ ಶಿವಮೊಗ್ಗ, ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳ ಲೋಕಾಯುಕ್ತ ಅಧಿಕಾರಿಗಳನ್ನೊಳಗೊಂಡ ಐದು ಪ್ರತ್ಯೇಕ ತಂಡಗಳು ಪಾಲ್ಗೊಂಡಿವೆ.

ಇದನ್ನೂ ಓದಿ » Job News: ಮುತ್ತೂಟ್ ಮನಿ, ಮಾರುತಿ ಸುಜುಕಿ ಕಂಪನಿಗಳಿಂದ ನೇರ ಸಂದರ್ಶನ, ಯಾವಾಗ?

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...