
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿಯಾಗಿದ್ದ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಪ್ರಕಾಶ್ ಜಿ.ಟಿ.ನಿಟಳಿ ಅವರನ್ನು ನೇಮಕ ಮಾಡಿದೆ.
ಇದನ್ನೂ ಓದಿ » ಆಧಾರ್ ಕೆಲಸಕ್ಕೆ ಇನ್ನು ಅಲೆದಾಟ ಬೇಡ! ಶಿವಮೊಗ್ಗದಲ್ಲಿ ಹೊಸ ಆಧಾರ್ ಸೇವಾ ಕೇಂದ್ರ ಆರಂಭ, ಎಲ್ಲಿದೆ ಗೊತ್ತೇ?
ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಕಮಿಷನರ್ ಆಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅವರು 2026ರ ಜನವರಿ ತಿಂಗಳಲ್ಲಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು.
ಪ್ರಭುಲಿಂಗ ಕವಳಿಕಟ್ಟಿ ವರ್ಗಾವಣೆ ಬೆನ್ನಲ್ಲೇ ಹೊಸ ಡಿಸಿ ನೇಮಕ!
ಪ್ರಭುಲಿಂಗ ಕವಳಿಕಟ್ಟಿ ವರ್ಗಾವಣೆ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ಪ್ರಕಾಶ್ ಜಿ.ಟಿ. ನಿಟಳಿ ಅವರನ್ನು ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಸರ್ಕಾರದ ಆಡಳಿತಾತ್ಮಕ ವರ್ಗಾವಣೆ ಆದೇಶದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಡಳಿತದಲ್ಲಿ ಈ ಬದಲಾವಣೆ ನಡೆದಿದೆ. ನೂತನ ಜಿಲ್ಲಾಧಿಕಾರಿಯಾಗಿ ಪ್ರಕಾಶ್ ಜಿ.ಟಿ.ನಿಟಳಿ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ » ಮೈನರ್ ಸವಾರಿ, ವಾಹನ ಮಾಲೀಕೆಗೆ ದಂಡದ ಬಿಸಿ! ಶಿವಮೊಗ್ಗದಲ್ಲಿ ರೂ.25 ಸಾವಿರ ದಂಡ ವಿಧಿಸಿದ ಕೋರ್ಟ್