
ಶಿವಮೊಗ್ಗ : ಸಿಪಿಐ ದೇವರಾಜ್ ನೇತೃತ್ವದಲ್ಲಿ ಸಂಚಾರ ಠಾಣೆ ಪೊಲೀಸರು ಇಂದು ಬೆಳಗ್ಗೆ ನಗರದಾದ್ಯಂತ ಶಾಲಾ, ಕಾಲೇಜು ವಾಹನಗಳ ದಿಢೀರ್ ತಪಾಸಣೆ ಕಾರ್ಯಾಚರಣೆ ನಡೆಸಿದರು. ಈ ವೇಳೆ ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ಚಾಲಕರ ವಿರುದ್ಧ 4 ಡ್ರಂಕ್ ಅಂಡ್ ಡ್ರೈವ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಿವಮೊಗ್ಗ ನಗರದ ಪ್ರಮುಖ ಸ್ಥಳಗಳಲ್ಲಿ ಸಂಚಾರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದರು. ಶಾಲೆ, ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವಾಹನಗಳು, ಬಸ್ಸುಗಳನ್ನು ತಡೆದು ತಪಾಸಣೆ ನಡೆಸಿದರು.
ಇದನ್ನೂ ಓದಿ » ಜಿಲ್ಲೆಯಲ್ಲಿ ಇಂದಿನಿಂದ ಐದು ದಿನಗಳವರೆಗೆ ಬೃಹತ್ ನೇಮಕಾತಿ ಅಭಿಯಾನ, 2000ಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ, ಎಲ್ಲಿ?
ಚಾಲಕರು ಮದ್ಯ ಸೇವನೆ ಮಾಡಿರುವ ಕುರಿತು ಪರಿಶೀಲಿಸಿದರು. ಈ ಸಂದರ್ಭ ನಾಲ್ಕು ಮಂದಿ ಚಾಲಕರು ಮದ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಸಂಚಾರಣೆ ಠಾಣೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದೇ ವೇಳೆ ಶಾಲಾ ವಾಹನದ ವಿಮೆ, ಎಮಿಷನ್ ರಿಪೋರ್ಟ್ ಹಾಗೂ ಫಿಟ್‌ನೆಸ್ ಸರ್ಟಿಫಿಕೇಟ್ ಅನ್ನು ಕಡ್ಡಾಯವಾಗಿ ಚಾಲ್ತಿಯಲ್ಲಿ ಇಟ್ಟುಕೊಳ್ಳುವಂತೆ ಸೂಚಿಸಿದರು. ಅಲ್ಲದೆ ವಾಹನಗಳ ಸುಸ್ಥಿತಿಯ ಕುರಿತು ಪರಿಶೀಲನೆ ನಡೆಸಿದರು.
ಇದನ್ನೂ ಓದಿ » ಜಮೀರ್ ಅಹಮದ್ ಗೆ ಡಿಸಿಎಂ ಸ್ಥಾನಕ್ಕಾಗಿ ಮುಸ್ಲಿಂ ಸಮುದಾಯ ಪ್ರತಿಭಟನೆ, ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ!