
ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ (ಬಾಳೆಬರೆ ಘಾಟ್) ರಸ್ತೆಯಲ್ಲಿ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಡಳಿತ ಆದೇಶಿಸಿದೆ.
ಇದನ್ನೂ ಓದಿ » ಹುಲಿಕಲ್ ಬಾಳೆಬರೆ ಘಾಟ್ ಮಣ್ಣು ಕುಸಿತ ದುರ್ಘಟನೆ ಸ್ಥಳಕ್ಕೆ ಸ್ಥಳೀಯ ಶಾಸಕರು ಮತ್ತು ಜಿಲ್ಲಾಧಿಕಾರಿಗಳಿಂದ ಭೇಟಿ, ಪರಿಶೀಲನೆ
ಕಳೆದ ಮಳೆಗಾಲದಲ್ಲಿ ಈ ಮಾರ್ಗದ ಹೇರ್ಪಿನ್ ತಿರುವಿನಲ್ಲಿ ಭೂಕುಸಿತ ಸಂಭವಿಸಿತ್ತು. ಇದರ ದುರಸ್ತಿಗಾಗಿ ತಡೆಗೋಡೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿತ್ತು. ಆದರೆ, ಏಪ್ರಿಲ್ 09 ರಂದು ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಸುಮಾರು 12 ಮೀಟರ್ ಎತ್ತರದಿಂದ ಮತ್ತೆ ಭೂಕುಸಿತ ಉಂಟಾಗಿದ್ದು, ಕಾಂಕ್ರೀಟ್ ರಸ್ತೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಈ ರಸ್ತೆಯು ಸಂಚಾರಕ್ಕೆ ಯೋಗ್ಯವಾಗಿಲ್ಲದ ಕಾರಣ, ಕಾಮಗಾರಿ ಪೂರ್ಣಗೊಳ್ಳುವವರೆಗೆ ರಸ್ತೆಯನ್ನು ಬಂದ್ ಮಾಡಲಾಗಿದೆ.
– ಅಭಿಷೇಕ್ ವಿ., ಅಪರ ಜಿಲ್ಲಾಧಿಕಾರಿಗಳು
ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳು : ಘಾಟ್ ರಸ್ತೆ ಬಂದ್ ಆಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಈ ಕೆಳಗಿನ ಪರ್ಯಾಯ ರಸ್ತೆಗಳನ್ನು ಬಳಸಲು ಸೂಚಿಸಲಾಗಿದೆ.
ಈ ಬದಲಾವಣೆಯು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ರಕ್ಷಣಾತ್ಮಕ ಕಾಮಗಾರಿ ಮುಗಿಯುವವರೆಗೆ ಚಾಲ್ತಿಯಲ್ಲಿರುತ್ತದೆ. ಸಾರ್ವಜನಿಕರು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ತಿಳಿಸಿದ್ದಾರೆ.
ಇದನ್ನೂ ಓದಿ » ಏ.12, ನಗರದ ಹಲವು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ