ಇಂದಿನಿಂದ ವೈಭವದ ಸಾಗರ ಮಾರಿಕಾಂಬ ಜಾತ್ರೆ, ಯಾವ ದಿನದಂದು ಇನ್ನೆಲ್ಲಾ ಕಾರ್ಯಕ್ರಮ ನಡೆಯಲಿವೆ?

ಸಾಗರ : ಇಂದಿನಿಂದ ಫೆ.11 ರವರೆಗೆ ನಡೆಯುವ ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀ ಮಾರಿಕಾಂಬೆ ಜಾತ್ರೆಗೆ ಸಕಲ ಸಿದ್ಧತೆ ನಡೆದಿದೆ. ಜಾತ್ರೆ ಹಿನ್ನೆಲೆಯಲ್ಲಿ ಧಾರ್ಮಿಕ ವಿಧಿವಿಧಾನಗಳು ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಸೋಮವಾರ ರಾತ್ರಿಯಿಂದಲೇ ತವರು ಮನೆಯಲ್ಲಿ ಅಮ್ಮನವರ ಪ್ರತಿಷ್ಟಾಪನಾ ಕಾರ್ಯ ನಡೆಯಲಿದೆ.

»» ಜಾತ್ರೆಯ ಬಂದೋಬಸ್ತಿಗಾಗಿ 3 ಡಿವೈಎಸ್‌ಪಿ, 7 ಸರ್ಕಲ್ ಇನ್ಸ್‌ಪೆಕ್ಟರ್, 14 ಸಬ್ ಇನ್ಸ್ ಪೆಕ್ಟರ್, 44 ಐ.ಎ.ಎಸ್., 194 ಆರಕ್ಷಕರು, 37 ಮಹಿಳಾ ಸಿಬ್ಬಂದಿ, 200 ಹೋಮ್‌ ಗಾರ್ಡ್ ಸೇರಿದಂತೆ 500 ಅಧಿಕಾರಿ ಸಿಬ್ಬಂದಿ ನೇಮಕ ಮಾಡಲಾಗಿದೆ. ಕಾನೂನು ಸುವ್ಯವಸ್ಥೆಗಾಗಿ ಸಿಸಿ ಕ್ಯಾಮರಾ ಅಳವಡಿಸಲು 50 ಸ್ಥಳಗಳನ್ನು ಗುರುತಿಸಲಾಗಿದ್ದು ಸುಮಾರು 150 ಸಿಸಿ ಕ್ಯಾಮರಾ ಅಳವಡಿಸಲಾಗಿದೆ.

ಜಾತ್ರೆ ಹಿನ್ನೆಲೆಯಲ್ಲಿ ಧಾರ್ಮಿಕ ಕಾರ್ಯಕ್ರಮದ ಜೊತೆ ಸಾಂಸ್ಕೃತಿಕ ಕಾರ್ಯಕ್ರಮ ಫೆ.04 ರಿಂದ 11ರವರೆಗೆ ನಡೆಯಲಿದೆ. ಫೆ.06 ರಿಂದ 08 ರವರೆಗೆ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ ಕಾನ್ವೆಂಟ್ ಶಾಲೆ ಎದುರಿನ ನೆಹರೂ ಮೈದಾನದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಫೆ.05 ರಂದು ಜಾತ್ರೋತ್ಸವವನ್ನು ಸಂಜೆ 7.00 ಗಂಟೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸ ಲಿದ್ದಾರೆ. ವಿಶೇಷ ಅತಿಥಿಯಾಗಿ ಚಲನಚಿತ್ರ ನಟ ಡಾ. ಶಿವರಾಜಕುಮಾ‌ರ್ ಭಾಗವಹಿಸುವರು. ವೇದಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರತಿಷ್ಟಾನದ ಅಧ್ಯಕ್ಷ ನಾಗೇಂದ್ರ ಕೆ.ಎನ್.ವಹಿಸಲಿದ್ದಾರೆ.

ಫೆ.030ರಂದು ಸಂಜೆ 5.00 ಗಂಟೆಗೆ ವಸ್ತು ಪ್ರದರ್ಶನವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಲಿದ್ದಾರೆ. ಫೆ.06 ರಂದು ನಡೆಯಲಿರುವ ಕುಸ್ತಿ ಪಂದ್ಯಾವಳಿ ನಡೆಯಲಿವೆ.

ಫೆ.03 ರಂದು ರಾತ್ರಿ 9.00 ಗಂಟೆಗೆ ಅಮ್ಮನವರ ಉತ್ಸವ ಮೂರ್ತಿಯ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಲಿದ್ದು, ನಂತರ ಗಂಡನಮನೆ ಎದುರಿನ ಭವ್ಯ ಗದ್ದುಗೆಯಲ್ಲಿ ಪ್ರತಿಷ್ಟಾಪನೆ ನಡೆಯಲಿದೆ.

ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಫೆ.03 ರಿಂದ 11 ರವರೆಗೆ ಬರುವ ಭಕ್ತಾದಿಗಳಿಗೆ ವೀರಶೈವ ಕಲ್ಯಾಣ ಮಂಟಪದಲ್ಲಿ ಊಟದ ವ್ಯವಸ್ಥೆ ಇರುತ್ತದೆ. ಫೆ.11 ರಂದು ರಾತ್ರಿ ಅಮ್ಮನವರನ್ನು ವನಕ್ಕೆ ಬಿಡುವ ಶಾಸ್ತ್ರ ಇರುತ್ತದೆ.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...