
ಶಿವಮೊಗ್ಗ : ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿ ನೀಡುವ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ಇದನ್ನೂ ಓದಿ » Job News: ಜೂ.30, ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ, ಎಲ್ಲಿ?
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಹಲವು ವರ್ಷಗಳಿಂದ ಮತದಾನ ಮಾಡುತ್ತಿರುವ ಜನರು ಈಗ ಮತ್ತೆ ನಾಗರಿಕತ್ವ ಸಾಬೀತುಪಡಿಸುವಂತಹ ಪರಿಸ್ಥಿತಿ ನಿರ್ಮಾಣವಾಗಬಾರದು.
ನಕಲಿ ದಾಖಲೆಗಳ ಮೂಲಕ ಯಾರಾದರೂ ಪ್ರವೇಶಿಸಿದ್ದರೆ ಅವರನ್ನು ತಡೆಯುವ ಜವಾಬ್ದಾರಿ ಕೇಂದ್ರ ಸರ್ಕಾರದ್ದಾಗಿದೆ. ಆದರೆ ಹಲವು ವರ್ಷಗಳಿಂದ ಮತದಾನ ಮಾಡುತ್ತಿರುವವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವಂತಹ ಕ್ರಮಗಳ ಬಗ್ಗೆ ಎಚ್ಚರಿಕೆ ಅಗತ್ಯವಿದೆ ಎಂದರು.
ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದರೆ ನಾಗರಿಕರ ಹಕ್ಕಿನ ಬಗ್ಗೆ ಗೊಂದಲ ಸೃಷ್ಟಿಯಾಗುವ ಸಾಧ್ಯತೆ ಇದೆ. ಆದ್ದರಿಂದ ಜನರಿಗೆ ಸಮರ್ಪಕ ಮಾಹಿತಿ ನೀಡಿ ಪ್ರಕ್ರಿಯೆ ನಡೆಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ » ಕಿರಣ ಕೇಂದ್ರ ವಿದ್ಯಾಲಯ ಶಾಲೆಯಲ್ಲಿ ವಿವಿಧ ಶೈಕ್ಷಣಿಕ ಕ್ಲಬ್ ಗಳ ಕಾರ್ಯಕ್ರಮಕ್ಕೆ ಚಾಲನೆ