
ಶಿವಮೊಗ್ಗ : ನಗರದ ಉಷಾ ನರ್ಸಿಂಗ್ ಹೋಂ ವೃತ್ತದ ಬಳಿ ರಾಂಗ್ ಸೈಡ್‌ನಲ್ಲಿ ಆಟೋ ಚಲಾಯಿಸಿಕೊಂಡು ಬಂದ ಆಟೋ ಚಾಲಕರಿಬ್ಬರು ಎದುರುಗಡೆಯಿಂದ ಬರುತ್ತಿದ್ದ ಕಾರಿಗೆ ಸೈಡ್ ನೀಡದೆ ಅನುಚಿತ ವರ್ತನೆ ತೋರಿದವರಿಗೆ ಟ್ರಾಫಿಕ್ ಪೊಲೀಸರು ದಂಡ ವಿಧಿಸಿ, ಎಚ್ಚರಿಕೆ ನೀಡಿರುವ ಘಟನೆ ನಡೆದಿದೆ.
ಇದನ್ನೂ ಓದಿ » ಜಿಲ್ಲಾಧಿಕಾರಿಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ, ಪರಿಶೀಲನೆ
ಕಾರು ಚಲಾಯಿಸುತ್ತಿದ್ದ ಮಹಿಳೆಗೆ ದಾರಿ ಬಿಡದೆ ಅನುಚಿತವಾಗಿ ವರ್ತಿಸಿದ ಬಗ್ಗೆ ಆರೋಪ ಕೇಳಿ ಬಂದಿದೆ. ಶಾಲೆಯಿಂದ ತನ್ನ ಮಕ್ಕಳನ್ನು ಕಾರಿನಲ್ಲಿ ಕರೆದುಕೊಂಡು ಬರುತ್ತಿದ್ದ ವೇಳೆ, ಆಟೋ ಚಾಲಕರಿಬ್ಬರು ರಾಂಗ್ ಸೈಡ್‌ನಲ್ಲಿ ಬಂದು ಕಾರಿಗೆ ಅಡ್ಡ ನಿಲ್ಲಿಸಿ ತೊಂದರೆ ಕೊಟ್ಟಿದ್ದರು ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ತೆಗೆದುಕೊಂಡ ಟ್ರಾಫಿಕ್ ಪೊಲೀಸರು ಇಬ್ಬರೂ ಆಟೋ ಚಾಲಕರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.
ಮಹಿಳೆಯ ಕಾರಿಗೆ ದಾರಿ ಬಿಡದೆ ತಡೆಯೊಡ್ಡಿದ್ದಲ್ಲದೆ, ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಆಟೋ ಚಾಲಕರಿಗೆ ಭಾರತೀಯ ಮೋಟಾರು ವಾಹನ ಕಾಯ್ದೆಯ ಅಡಿಯಲ್ಲಿ ದಂಡ ವಿಧಿಸಿರುವ ಪೊಲೀಸರು, ಇನ್ನೊಮ್ಮೆ ಹೀಗೆ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ » ಲೋಕಾಯುಕ್ತ ದಾಳಿ, ಬಿಸಿಎಂ ಜಿಲ್ಲಾ ಅಧಿಕಾರಿ ಬಳಿ ಪತ್ತೆಯಾಗಿದ್ದೇನೇನು?