ಶಿವಮೊಗ್ಗ : ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ನಾಳೆ (ಸೆ.12) ರಂದು ಮಧ್ಯಾಹ್ನ 1.30ಕ್ಕೆ ಜಿಲ್ಲೆಗೆ ಆಗಮಿಸಿ ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗೂ ನಂತರ ನೂತನವಾಗಿ ನಿರ್ಮಿಸಿರುವ ಪರಿವೀಕ್ಷಣಾ ಮಂದಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.











