ಶಿವಮೊಗ್ಗ : ಸಾರಿಗೆ ಇಲಾಖೆಯಲ್ಲಿ ಬಾಕಿ ಇರುವ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ, ಶೇ.50 ರಷ್ಟು ದಂಡ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸರ್ಕಾರವು ಸಾರ್ವಜನಿಕರಿಗೆ ಸುವರ್ಣಾವಕಾಶ ಕಲ್ಪಿಸಿದೆ ಎಂದು ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರ ಬಿ. ಶಿರೋಳ್ಕರ್ ತಿಳಿಸಿದ್ದಾರೆ.










